ಮಾರ್ಚ್ 3ರಂದು ದೇವನಹಳ್ಳಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ದೇವನಹಳ್ಳಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಅದಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮಕ್ಕೆ ಭೇಟಿ ನೀಡಿ ರಣಭೈರೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಶಾ ಚನ್ನಕೇಶವಸ್ವಾಮಿ ದೇಗುಲಕ್ಕೂ ಭೇಟಿ ನೀಡಲಿದ್ದಾರೆ.