ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರಕ್ಕೆ ಸಿಎಂ ಬೊಮ್ಮಾಯಿ ಆಗಮನ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದು ಸಿದ್ದಾಪುರದ ಎಂ.ಜಿ.ಸಿ ಕಾಲೇಜು ಮೈದಾನಕ್ಕೆ ಬಂದಿಳಿದಿದ್ದಾರೆ.
ಸಿದ್ದಾಪುರದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ, ಹಾಗೂ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.