ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ, ಸಿದ್ಧರಾಮಯ್ಯ ಬಂಧನ

ಬೆಂಗಳೂರು: ಚೆನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಮೇಲೆ ಲೋಕಾಯುಕ್ತ ದಾಳಿಯಾಗುವುದರೊಂದಿಗೆ ಬಿಜೆಪಿಯ ಲಂಚಾವತಾರ ಬಯಲಿಗೆ ಬಂದಿದೆ. ಈ ಕೇಸ್‌ನಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಅವರ ಬಂಧನವಾಗಬೇಕು ಹಾಗೂ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ್‌ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಕಾಂಗ್ರೆಸ್‌ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯ ಬಳಿಕ ಕಾಂಗ್ರೆಸ್‌ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪೊಲೀಸರು ಬಂಧಿಸಿದರು.

ಇದಕ್ಕೂ ಮುನ್ನ ಹಿರಿಯ ನಾಯಕರು ಪೋಸ್ಟರ್‌ಗಳನ್ನು ಹಿಡಿದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನ ಮಾಡಿದರು. ಇದನ್ನು ಪೊಲೀಸರು ತಡೆದಾಗ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ಮಾಡಲು ಅರಂಭಿಸಿದರು. ಈ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ ಸಿದ್ಧರಾಮಯ್ಯ, ನೈತಿಕ ಹೊಣೆ ಹೊತ್ತು ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು’ ಎಂದು ಹೇಳಿದರು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧವೂ ಹರಿಹಾಯ್ದರು. ‘ಮಿಸ್ಟರ್‌ ಅಮಿತ್‌ ಶಾ ಈಗ ಏನು ಹೇಳ್ತೀರಾ? ನೀವೂ ಕೂಡ ಅಧಿಕಾರದಲ್ಲಿರಲು ಲಾಯಕ್ಕಲ್ಲ. ನಿಮ್ಮದೇ ಸರ್ಕಾರದಲ್ಲಿ ಸಿಬಿಐ, ಎನ್‌ಐಎ ಇದೆ. ತನಿಖೆ ಮಾಡಿಸಿ ಹಣದ ಮೂಲ ಪತ್ತೆ ಮಾಡಿ’ ಎಂದು ಹೇಳಿದರು.

error: Content is protected !!