ಕೂಗು ನಿಮ್ಮದು ಧ್ವನಿ ನಮ್ಮದು

ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ, ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಕೊರೋನಾ ಮಹಾಮಾರಿ ಕಾಟ?

ಬೆಂಗಳೂರು: ವಿಶ್ವದ ಹಲವು ರಾಷ್ಟ್ರಗಳಲ್ಲಿ ಕಟ್ಟಿ ಕಾಡಿದ್ದ ಕೊರೋನಾ ವೈರಸ್ ಈಗ ಮತ್ತೆ ಕರ್ನಾಟಕದಲ್ಲಿ ಸದ್ದಿಲ್ಲದೆ ಮಾಹಾಮಾರಿಯ ಭೀತಿ ಶುರುವಾಗಿದೆ. ಹೌದು..ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣಗಳಲ್ಲಿ ಏರಿಕೆ ಕಂಡಿದ್ದು, ಆತಂಕ ಮೂಡಿಸಿದೆ. ಬದಲಾದ ವಾತಾವರಣದಿಂದಾಗಿ ರಾಜ್ಯದಲ್ಲಿ ನೆಗಡಿ, ಕೆಮ್ಮು ಹಾಗೂ ಜ್ವರದ ಅನಾರೋಗ್ಯ ಸಮಸ್ಯೆ ತಲೆದೋರಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ವಾತಾವರಣದ ಪರಿಣಾಮ ಎಂದು ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಿಸಿಕೊಂಡವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡುಬರುತ್ತಿದೆ. ನಿನ್ನೆ(ಮಾರ್ಚ್ 04) ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊನಾರೋನಾ ಪ್ರಕರಣ ಹೆಚ್ಚಳವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದ್ದರಿಂದ ರಾಜ್ಯದಲ್ಲಿ ಮತ್ತೆ ಮಹಾಮಾರಿ ಶುರುವಾಗುತ್ತಾ ಎನ್ನುವ ಆತಂಕ ಸೃಷ್ಟಿಸಿದೆ. ಇದರಿಂದ ಸಾರ್ವಜನಿಕರು ಎಚ್ಚರಿಂದ ಇರಬೇಕು. ಕೆಮ್ಮು, ನೆಗಡಿ ಇರುವವರಿಂದ ಕೊಂಚ ಅಂತರ ಕಾಪಾಡಿಕೊಳ್ಳುವುದು ಸೂಕ್ತ. ಇನ್ನು ಶೀತ, ಕೆಮ್ಮು ಇದ್ದವರು ಮಾಸ್ಕ್ ಹಾಕಿಕೊಳ್ಳಬೇಕು

error: Content is protected !!