ಕೂಗು ನಿಮ್ಮದು ಧ್ವನಿ ನಮ್ಮದು

ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗಿಡಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಹತ್ತಿರ ಕಾರು ಪಲ್ಟಿಯಾಗಿದ್ದು, ದೊಡ್ಡಯ್ಯ ಪುರಾಣಿಕಮಠ (37) ಮತ್ತು ಪುಷ್ಪಾವತಿ (55) ಮೃತ ದುರ್ದೈವಿಗಳಾಗಿದ್ದಾರೆ.

ಇನ್ನು ಮೃತ ದೊಡ್ಡಯ್ಯ ಪುರಾಣಿಕಮಠ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಸೇನೆಯಿಂದ ನಿವೃತ್ತಿ ಹೊಂದಿದ್ದರು ಎನ್ನಲಾಗಿದೆ. ಮೂಲತ ವಿಜಯಪುರ ಜಿಲ್ಲೆಯ ಕರಭಂಟನಾಳದ ಇವರು ಹೆಂಡತಿ ಎರಡು ಮಕ್ಕಳು ಹಾಗೂ ಅತ್ತೆ ಜೊತೆ ಡವಳಗಿಯಿಂದ ಮುದ್ದೇಬಿಹಾಳಕ್ಕೆ ಹೂಗುವಾಗ ಈ ದುರ್ಘಟನೆ ಸಂಭವಿಸಿದೆ.

ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದರೇ ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತಿದೆ. ಈ ಸಂಬಂಧ ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!