ಕೂಗು ನಿಮ್ಮದು ಧ್ವನಿ ನಮ್ಮದು

ಮಹಿಳೆಯರ ಮುಂದೆ ಬೆತ್ತಲಾಗಿ ಅಸಭ್ಯತೆ ತೋರಿದ: ವಿಡಿಯೋ ವೈರಲ್ ಆಗಿ ಪೊಲೀಸರ ಅತಿಥಿಯಾದ

ಚಾಮರಾಜನಗರ: ಪಾನಮತ್ತ ವ್ಯಕ್ತಿ ಬೆತ್ತಲಾಗಿ ಓಡಾಡುವುದಲ್ಲದೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿರುವ ವಿಡಿಯೊ ಒಂದು ವೈರಲ್ ಆಗಿದೆ. ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಓರ್ವ ವ್ಯಕ್ತಿ ಅಶ್ಲೀಲವಾಗಿ ವರ್ತಿಸಿದ್ದಾನೆ. ಆ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ. ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಆತ ಜಗಳವಾಡಿ ಬಳಿಕ ಬೆತ್ತಲೆಯಾಗಿ ಮಹಿಳೆಯರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾನೆ.

https://youtu.be/JYAZR4aLrGE

ತಾಂಡವಮೂರ್ತಿ ಬೆತ್ತಲೆಯಾಗಿ ಓಡಾಡುತ್ತಿದ್ದನ್ನು ನೋಡಿದ ಸ್ಥಳೀಯರು ವಿಡಿಯೋ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಕುಪಿತಗೊಂಡ ತಾಂಡವಮೂರ್ತಿಯ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಪೊಲೀಸರಿಗೆ ಒಪ್ಪಿಸಿದ ಗ್ರಾಮದ ಮೂವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಬಳಿಕ ಗ್ರಾಮಸ್ಥರು ಹಲ್ಲೆಗೊಳಗಾದ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ . ಅಶ್ಲೀಲವಾಗಿ ವರ್ತಿಸಿದ ತಾಂಡವಮೂರ್ತಿ ಮತ್ತು ಆತನ ಮಕ್ಕಳಾದ ಮಹೇಂದ್ರ, ಸಂತೋಷ್‌ನನ್ನು ಪೊಲೀಸರು ಬಂಧಿಸಿದ್ದು, ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!