ಕೊಡಗು: ಯುವಕನೊಬ್ಬ ತನ್ನ ಎದೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗಿನಲ್ಲಿ ನಡೆದಿದೆ. ಮಾದಾಪುರ ಸಮೀಪದ ಮುವತ್ತೋಕ್ಲುವಿನಲ್ಲಿ ಈ ಘಟನೆ ನಡೆದ ನಡೆದಿದ್ದು, ಮೃತನನ್ನು ಪ್ರವೀಣ್ (28) ಎಂದು ಗುರುತಿಸಲಾಗಿದೆ.
ಸಿಂಗಲ್ ಬ್ಯಾರಲ್ ಗನ್ ನಿಂದ ಎದೆಗೆ ಗುಂಡು ಹೊಡೆದುಕೊಂಡು ಯುವಕ ಪ್ರಾಣ ಬಿಟ್ಟಿದ್ದಾನೆ. ಸಧ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೇರೆ ಕಡೆ ಉದ್ಯೋಗದಲ್ಲಿರುವ ಪ್ರವೀಣ್ ಕೆಲವು ದಿನಗಳ ಹಿಂದೆ ಊರಿಗೆ ಬಂದಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಾದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.