ಕೂಗು ನಿಮ್ಮದು ಧ್ವನಿ ನಮ್ಮದು

ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಓರ್ವ ಸಾವು

ಮಂಡ್ಯ: ಜಿಲ್ಲೆ ಮದ್ದೂರು ತಾಲೂಕಿನ ಚಳ್ಳನಕೆರೆ ಗೇಟ್ ಬಳಿ ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

ಇನ್ನು ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅಪಘಾತದ ರಭಸಕ್ಕೆ ವಾಹನ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎಂಬುದು ತಿಳಿದಿಲ್ಲ.

error: Content is protected !!