ಕೂಗು ನಿಮ್ಮದು ಧ್ವನಿ ನಮ್ಮದು

ಬಸ್ಸಿಗೆ ಡಿಕ್ಕಿ ಹೊಡೆದ ಟ್ರಕ್; 18 ಮಂದಿ ದಾರುಣ ಸಾವು

ಉತ್ತರ ಪ್ರದೇಶ: ಡಬಲ್ ಡೆಕ್ಕರ್ ಬಸ್ಸಿಗೆ ಅತೀ ವೇಗವಾಗಿ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 18 ಮಂದಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ಸಮೀಪದ ಲಕ್ನೋ-ಅಯೋಧ್ಯಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಮ್ ಸನೇಹಿ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 1.30ರಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 19ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಸದ್ಯದ ಘಟನೆ ಬಗ್ಗೆ ಯುಪಿ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಶೀಘ್ರವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!