ರಾಮನಗರ: ರಾಮನಗರದಲ್ಲಿ ಬೆಳ್ಳಂಬೆಳಿಗ್ಗೆ ಜವರಾಯ ತನ್ನ ಅಟ್ಟಹಾಸ ಮೆರೆದಿದ್ದಾನೆ. ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಮೂವರು ದುರ್ಮರಣಕ್ಕಿಡಾಗಿದ್ದಾರೆ. ದಂಪತಿ, ಮಗು ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಹಾರೋಹಳ್ಳಿಯ ಜಿಗಣಿ ಹೆದ್ದಾರಿಯ ತಟ್ಟೆಕೆರೆ ಬಳಿ ಈ ಭೀಕರ ದುರ್ಘಟನೆ ಸಂಭವಿಸಿದೆ.
ಟಾಟಾ ಇಂಡಿಕಾ ಕಾರು ಮತ್ತು ರಾಯಲ್ ಎನ್ ಫೀಲ್ಡ್ ಬೈಕ್ ನಡುವೆ ಈ ಅಪಘಾತ ನಡೆದಿದೆ. ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಾಯಲ್ ಎನ್ ಫೀಲ್ಡ್ ಬೈಕ್ ಹೊತ್ತಿ ಉರಿದಿದ್ದು, ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿಗಳು ಸೇರಿ ನಾಲ್ಕು ವರ್ಷದ ಗಂಡು ಮಗು ಸಾವಿಗಿಡಾಗಿದೆ. ಸ್ಥಳದಲ್ಲಿ ಸ್ಥಳಿಯರು ಜಮಾಯಿಸಿದ್ದು, ಮಮ್ಮಲ ಮರಗುತ್ತಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ರೆ, ಮೃತರ ಪತ್ತೆಯೂ ನಡೆಯುತ್ತಿದೆ.