ವಾಷಿಂಗ್ಟನ್: ಅಫ್ಘಾನಿಸ್ತಾನದಿಂದ ಸೇನೆ ಹಿಂದೆ ಪಡೆದುಕೊಂಡ ಅಧ್ಯಕ್ಷ ಜೋ ಬೈಡನ್ ನಿರ್ಧಾರ ಅಮೆರಿಕಾ ಇತಿಹಾಸದಲ್ಲಿ ದೊಡ್ಡ ಕಪ್ಪು ಚುಕ್ಕೆ ಆಗಲಿದೆ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾಗ್ದಾಳಿ ನಡೆಸಿದ್ರು. ಅಫ್ಘಾನಿಸ್ತಾನ ಸೇನೆಯೇ ಹೋರಾಟ ಮಾಡದಿರುವಾಗ ನಮ್ಮ ಸೈನಿಕರು ಅಲ್ಲಿ ಬಲಿ ಆಗುವುದರಲ್ಲಿ ಅರ್ಥ ವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ರು.
ಅಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣವಾಗಿ ತಮ್ಮ ಕೈವಶ ಮಾಡಿಕೊಡ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಜೋ ಬೈಡನ್, ಸೇನೆ ಹಿಂಪಡೆಯುವ ಬಗ್ಗೆ ಟ್ರಂಪ್ ಅವಧಿಯಲ್ಲಿ ಒಪ್ಪಂದ ಆಗಿತ್ತು. ಆ ಒಪ್ಪಂದವನ್ನು ಜಾರಿಗೊಳಿಸುತ್ತಿದ್ದೇನೆ ಎಂದು ಹೇಳಿದ್ರು. ಹಿಂದೆ ಮಾತುಕತೆ ವೇಳೆಯಲ್ಲಿ ಅಫ್ಘಾನಿಸ್ತಾನ ಸೇನೆ ಹೋರಾಟ ಮಾಡುವುದಾಗಿ ಅಧ್ಯಕ್ಷ ಅಶ್ರಫ್ ಘನಿ ಹೇಳಿದ್ರು. ಆದ್ರೆ ಅವರೆ ಈಗ ಓಡಿ ಹೋಗಿದ್ದಾರೆ.
ಅಫ್ಘಾನಿಸ್ತಾನ ಸೇನೆಯೇ ಹೋರಾಟ ಮಾಡದಿರುವಾಗ ನಮ್ಮ ಸೈನಿಕರು ಅಲ್ಲಿ ಬಲಿ ಆಗುವುದರಲ್ಲಿ ಯಾವುದೇ ರೀತಿಯ ಅರ್ಥ ವಿಲ್ಲ. ಈ ಹಿಂದೆಯೇ ಮಾಡಿದ ತಪ್ಪುಗಳನ್ನೇ ನಾವು ಮತ್ತೆ ಮಾಡುವುದಿಲ್ಲ. ಜೊತೆಗೆ ಈಗಾಗಲೇ ನಾವು ೩ ಶತಕೋಟಿಯಷ್ಟು ಡಾಲರ್ ಹಣವನ್ನು ಖರ್ಚು ಮಾಡಿದ್ದೇವೆ. ಈ ಯುದ್ಧದಲ್ಲಿ ಇನ್ನೂ ಎಷ್ಟು ತಲೆಮಾರಿನವರೆಗೆ ಅಮೇರಿಕದ ಗಂಡು ಹಾಗೂ ಹೆಣ್ಣು ಮಕ್ಕಳು ತಮ್ಮ ಜೀವವನ್ನು ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದ್ರು.
ತಾಲಿಬಾನ್ ಕುರಿತು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ನನ ವಕ್ತಾರ ನೋಮಾನಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಾಲಿಬಾನ್ ಗಳಿಗೆ ಶುಭ ಕೋರಿರುವ ನೋಮಾನಿ, ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿದ್ದನು ಸಮರ್ಥಿಸಿಕೊಂಡು, ನಿಮಗೆ ಹಿಂದು ಮುಸ್ಲಿಮರು ಸಲಾಮ್ ಹೇಳುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.
ಇತ್ತ ಬ್ರಿಟನ್ ನವರು ೨೦ ಸಾವಿರ ಶರಣಾರ್ಥಿ ಅಫ್ಗನರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದೆ. ಇದರಲ್ಲಿ ಮಹಿಳೆ ಹಾಗೂ ಧರ್ಮದ ಆಧಾರದಲ್ಲಿ ಅಲ್ಪಸಂಖ್ಯಾತರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದು ಹೇಳಿದೆ.