ಬೆಳಗಾವಿ: ರಾಜ್ಯಾದ್ಯಂತ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಹಿನ್ನಲೆ ಜಿಲ್ಲೆಯಲ್ಲಿ ಎಲ್ಲಾ ಬಸ್‌ಗಳು ಫುಲ್ ಆಗಿದ್ದಾವೆ. ಅದರಂತೆ ಜಿಲ್ಲೆಯ ಚಿಕ್ಕೋಡಿ ಯಿಂದ ಕೆರೂರ ಮಾರ್ಗವಾಗಿ ಕಾಡಾಪೂರ ಕಡೆಗೆ ತುಂಬಿ ಹೊರಟ್ಟಿದ್ದ ಬಸ್‌ನಿಂದ ವೃದ್ದೆಯೊಬ್ಬರು ಆಯತಪ್ಪಿ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ವೃದ್ದೆ ಆಯತಪ್ಪಿ ಬಸ್ನಿಂದ ಬೀಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚಿನ ಬಸ್ ಬಿಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.