ಕೂಗು ನಿಮ್ಮದು ಧ್ವನಿ ನಮ್ಮದು

ಲೋಕಾಯುಕ್ತ ದಾಳಿ ಹಿನ್ನಲೆ ಹೊನ್ನಾಳಿಯ ಅಮಿತ್ ಶಾ ಕಾರ್ಯಕ್ರಮ ಮುಂದೂಡಿಕೆ

ಮಾರ್ಚ್ 12 ರಂದು ಹೊನ್ನಾಳಿಗೆ ಆಗಮಿಸಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಹೊನ್ನಾಳಿ ತಾಲೂಕಿನ ಪಕ್ಕದ ಕ್ಷೇತ್ರವಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರ ವಾಗಿದೆ.

ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಪುತ್ರ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್ಎಸ್ಬಿ)ಯ ಚೀಫ್ ಅಕೌಂಟೆಂಟ್ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದರು.

ಈ ಹಿನ್ನೆಲೆಯಲ್ಲಿ ಹೊನ್ನಾಳಿ, ಚನ್ನಗಿರಿ ಸುತ್ತಮುತ್ತಾ ಸ್ಥಳಗಳೆಲ್ಲವೂ ಲೋಕಾಯುಕ್ತ ಅಧಿಕಾರಿಗಳ ತನಿಖೆಯಲ್ಲಿದೆ ಆದ್ದರಿಂದ ಮಾರ್ಚ್ 12 ರಂದು ಹೊನ್ನಾಳಿಗೆ ಆಗಮಿಸಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ.ಶಾಸಕ ಎಂ ಪಿ ರೇಣುಕಾಚಾರ್ಯ ,ಅಮಿತ್ ಶಾರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ತಾಂಡಗಳು, ಕುರುಬರಹಟ್ಟಿ, ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ 12 ಜಿಲ್ಲೆಗಳ ಸುಮಾರು 53 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಯೋಜನೆ ಹಮ್ಮಿಕೊಳ್ಳಲಾಗಿತ್ತು. ಅಮಿತ್ ಶಾ ಆಗಮನ ಹಿನ್ನಲೆ ರೇಣುಕಾಚಾರ್ಯ, ಜಿಲ್ಲಾಧಿಕಾರಿ, ಎಸ್ಪಿ, ಸಿಇಓ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಮಾಡಾಳ ವಿರುಪಾಕ್ಷಪ್ಪ ಪ್ರಕರಣದಿಂದ ಏಕಾಏಕಿ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ.

error: Content is protected !!