ಕೂಗು ನಿಮ್ಮದು ಧ್ವನಿ ನಮ್ಮದು

ಅಮಿಶ್ ಶಾ, ಮೋದಿ ನೇತೃತ್ವದಿಂದ ಆನೆಬಲ; ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿಶ್ ಶಾ ನೇತೃತ್ವದಿಂದ ನಮಗೆ ಆನೆ ಬಲ‌ ಸಿಕ್ಕಿದಂತಾಗಿದೆ ಎಂದು ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಮೋದಿ ಬರುತ್ತಾರೆ. ನನ್ನ ಬಹಳ ವರ್ಷದ ಕನಸು ನನಸಾಗಿದೆ. ಅಭಿವೃದ್ಧಿಗೆ ಏನೆಲ್ಲ ಮಾಡಬೇಕೋ ಅದನ್ನೆಲ್ಲ ಮಾಡಿದ್ದೇನೆಂಬ ತೃಪ್ತಿ ಇದೆ. ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ. ವೀರಶೈವ ‌ಲಿಂಗಾಯತ ಬಂಧುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತಿದ್ದೇನೆ. ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ನನಗೆ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಬೇಕೆಂದು ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

27 ನೇ ತಾರೀಖು‌ ನನಗೆ 80 ವರ್ಷ ಆಗುತ್ತಿದೆ. ಹೀಗಾಗಿ ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ಹೀಗಾಗಿ ವೀರಶೈವ ಬಂಧುಗಳು ಅಪಾರ್ಥ ಮಾಡಿಕೊಳ್ಳಬಾರದು. ಈ ಮೊದಲಿದ್ದಂತೆ ಸಮುದಾಯದ ಜನ ಬಿಜೆಪಿ ಬೆಂಬಲಿಸಬೇಕು. ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಯಾವುದೇ ನಾಯಕತ್ವ ಇಲ್ಲ. ಬರುವ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಮೇಲೆ ರೀಡೂ ಅಕ್ರಮ ಆರೋಪದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಅನಗತ್ಯವಾಗಿ ಒಂದು ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ನಂತರ ಶಿವಮೊಗ್ಗಕ್ಕೆ ತೆರಳಿದ್ದಾರೆ. ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಆಗಮಿಸಲಿರುವ ಮೋದಿ, ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಶಿವಮೊಗ್ಗದಲ್ಲಿ ಮೋದಿ ಸಮಾವೇಶಕ್ಕೆ ಭಾರೀ ತಯಾರಿ ನಡೆದಿದೆ.

ವಿಧಾನಸಭೆಯಲ್ಲಿ ಭಾವುಕರಾಗಿದ್ದ ಬಿಎಸ್ವೈ
ವಿಧಾನಸಭೆಯಲ್ಲಿದು ನನ್ನ ಕೊನೆಯ ಭಾಷಣ. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇನ್ನೆಂದೂ ವಿಧಾನಸಭೆ ಪ್ರವೇಶಿಸುವುದಿಲ್ಲ ಎಂದು ವಿಧಾನಸಭೆಯಲ್ಲಿ ಯಡಿಯೂರಪ್ಪ ಘೋಷಿಸಿದ್ದರು. ಈ ಮಾತುಗಳನ್ನಾಡುವಾಗ ಅವರು ಭಾವುಕರಾಗಿದ್ದರು. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಮತ್ತೆ ನಾನು ಸದನದ ಒಳಗೆ ಬರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದರು.

error: Content is protected !!