ದೊಡ್ಡಬಳ್ಳಾಪುರ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಇಸ್ಲಾಂ ಪುರದಲ್ಲಿ ನಡೆದಿದೆ.
ಶನಿವಾರ ರಾತ್ರಿ 9:30 ರ ವೇಳೆ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಕ್ಯಾಂಟರ್ ಬರುತ್ತಿತ್ತು. ಈ ವೇಳೆ ರಸ್ತೆ ಬದಿ ನಿಂತಿದ್ದ ಅಪರಿಚಿತ ವ್ಯಕ್ತಿ ಏಕಾಏಕಿ ಕ್ಯಾಂಟರ್ ಕೆಳಗೆ ನುಗ್ಗಿದ್ದಾನೆ. ಕ್ಯಾಂಟರ್ ವ್ಯಕ್ತಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.