ಕೂಗು ನಿಮ್ಮದು ಧ್ವನಿ ನಮ್ಮದು

ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ವಿಧಿವಶ

ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ತಡರಾತ್ರಿ ಸುಮಾರು 12.30ರ ವೇಳೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಆನಂದ್ ಮಾಮನಿ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಕೆಲ ವಾರಗಳ ಹಿಂದೆ ಚೆನ್ನೈನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಆನಂದ್ ಮಾಮನಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಸ್ವಕ್ಷೇತ್ರದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ವಿಷಯ ತಿಳಿದು ತಡರಾತ್ರಿಯೇ ಆಸ್ಪತ್ರೆಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ. 2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.

ಮತ್ತೆ 2013-2018 ರಲ್ಲಿ ಎರಡನೇ ಬಾ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ್ ಮಾಮನಿ ಅವರ ತಂದೆ ಚಂದ್ರಶೇಖರ್ ಡೆಪ್ಯುಟಿ ಸ್ಪೀಕರ್ ಆಗಿದ್ದ ವೇಳೆಯೇ ನಿಧನರಾಗಿದ್ದರು. ಚಂದ್ರಶೇಖರ್ ಮಾಮನಿ ಅವರು 1995-96ರ ಅವಧಿಯಲ್ಲಿ ಕರ್ನಾಟಕ ವಿಧಾನಸಭೆಯ ಉಪಾಧ್ಯಕ್ಷರು ಆಗಿದ್ರು. ತಂದೆಯೇ ಗತ್ತಿನಲ್ಲೇ ಆನಂದ್ ಮಾಮನಿ ಅವರು ಉಪಾಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತಿದ್ದರು.ಇದೀಗ ಕಾಕತಾಳಿಯ ಎಂಬಂತೆ ಆನಂದ ಮಾಮನಿ ಸಹ ಅದೇ ಹುದ್ದೆಯಲ್ಲಿದ್ದಾಗ ವಿಧಿವಶರಾಗಿದ್ದಾರೆ.

error: Content is protected !!