ಬೆಳಗಾವಿ: ಶಾಸಕ ಅನಿಲ್ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕರಾಗುವುದಕ್ಕಿಂತ ಮೊದಲೇ ಬೆನಕೆ ಬೆಳಗಾವಿ ಮಹಾನಗರ ಅಧ್ಯಕ್ಷರಾಗಿದ್ದರು. ಇದೀಗ ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ.ಹಾಲಿ ಶಾಸಕರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ ಬಗ್ಗೆ ಬೆಳಗಾವಿ ರಾಜಕಾರಣದಲ್ಲಿ ಬಿಸಿಬಿಸಿ ಚರ್ಚೆಗಳು ಆರಂಭಗೊಂಡಿದೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅನಿಲ್ ಬೆನಕೆಗೆ ಬಿಜೆಪಿ ಟಿಕೆಟ್ ಕೈ ತಪ್ಪುತ್ತಾ? ಪಕ್ಷ ಸಂಘಟನೆ ದೃಷ್ಟಿಯಿಂದ ಈ ಜವಾಬ್ದಾರಿ ನೀಡಲಾಗಿದೆಯೇ? ಎಂಬ ಬಗ್ಗೆ ಚರ್ಚೆಗಳು ನಡೆದಿವೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನಿಲ್ ಬೆನಕೆಗೆ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನ ನೀಡಿರುವುದು ಕುತೂಹಲ ಕೆರಳಿಸಿದೆ.