ಕೂಗು ನಿಮ್ಮದು ಧ್ವನಿ ನಮ್ಮದು

ಬಿಜೆಪಿಯವರು ಪಕ್ಷದ ವಿರುದ್ಧ ಮಾತನಾಡಿದರೆ ಶಿಸ್ತು ಕ್ರಮ ಎಂದು ಹೇಳಿ ವಿಮಾನ ಮೂಲಕ ದೆಹಲಿಯತ್ತ ಪ್ರಯಾಣ ಬೆಳೆಸಿದ ಅರುಣ್ ಸಿಂಗ್

ಬೆಂಗಳೂರು: ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಹೇಳಿಕೆ ಸಹಿಸಲ್ಲ ಎಂದು ಬಿಜೆಪಿ ಕೇಂದ್ರ ಸಮಿತಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಮಾತನಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನೀವು ಮಾತನಾಡುವುದರಿದ್ದರೆ ಪ್ರತಿಪಕ್ಷ ಕಾಂಗ್ರೆಸ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿ. ಅದು ಬಿಟ್ಟು ಪಕ್ಷದ ವಿರುದ್ಧ ಮಾತನಾಡಿದರೆ ಶಿಸ್ತುಕ್ರಮ ಜರುಗಿಸಲಾಗುವ ಎಚ್ಚರಿಕೆ ನೀಡಿದ್ದೇನೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು. ಕರ್ನಾಟಕದ ನಾಯಕರು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಬೇಕು. ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಇಬ್ಬರು, ಮೂವರು ಮಾತನಾಡಿದರು ಎಂದು ನೀವೂ ಮಾತನಾಡಬೇಡಿ. ಪಕ್ಷ ಮತ್ತು ನಾಯಕತ್ವದ ಬಗ್ಗೆ ಯಾರೊಬ್ಬರೂ ಮಾತನಾಡಬಾರದು. ನೀವು ನೀಡುವ ಬಹಿರಂಗ ಹೇಳಿಕೆಗಳಿಂದ ನಮಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ನೋವಾಗುತ್ತದೆ ಎಂದು ನುಡಿದರು. ಪಕ್ಷ ಮತ್ತು ಮುಖ್ಯಮಂತ್ರಿ ಸಿಎಂ ವಿರುದ್ಧ ಮಾತನಾಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು ಎಂದು ಮೂಲಗಳು ಹೇಳಿವೆ. ಎರಡು ದಿನಗಳಲ್ಲಿ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಅರುಣ್ ಸಿಂಗ್ ಭರವಸೆ ನೀಡಿದರು. ಬಿಜೆಪಿ ಕೋರ್ ಕಮಿಟಿ ಸಭೆ ಮುಗಿಸಿ ಹೊರ ನಡೆಯುವಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಕ್ಟರಿ ಸಿಂಬಲ್ ಪ್ರದರ್ಶಿಸಿದರು. ಮೂರು ದಿನಗಳ ರಾಜ್ಯ ಪ್ರವಾಸ ಮುಗಿಸಿ ಬಿಜೆಪಿ ಕಚೇರಿಯಿಂದ ವಿಮಾನ ನಿಲ್ದಾಣದತ್ತ ಅರುಣ್ ಸಿಂಗ್ ತೆರಳಿದರು. ಅಲ್ಲಿಂದ ದೆಹಲಿಗೆ ಸಿಂಗ್ ಹೋಗುತ್ತಾರೆ.

error: Content is protected !!