ಕೂಗು ನಿಮ್ಮದು ಧ್ವನಿ ನಮ್ಮದು

ಯಡಿಯೂರಪ್ಪ ಬಗ್ಗೆ ಹೈಕಮಾಂಡ್ಗೆ ತೃಪ್ತಿ ಇದೆ; ಅರುಣ್ ಸಿಂಗ್

ಬೆಂಗಳೂರು; ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ದೊಡ್ಡ ಚರ್ಚೆ ಶುರುವಾಗಿತ್ತು. ಬಿಜೆಪಿ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಹೈಕಮಾಂಡ್ ನಾಯಕರ ಇರಿಸು ಮುರಿಸಿಗೂ ಕಾರಣವಾಗಿತ್ತು. ಇದೇ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಮೂರು ದಿನಗಳ ಕಾಲ ರಾಜ್ಯ ಪ್ರವಾಸಕ್ಕೆ ಅರುಣ್ ಸಿಂಗ್ ಅವರನ್ನು ರಾಜ್ಯಕ್ಕೆ ಕಳಿಸಲಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಕಾಲ ಸನ್ನಿಹಿತವಾಗಿದೆ ಎಂದೇ ಹೇಳಲಾಗುತ್ತಿತ್ತು. ಆದರೆ, ಎಲ್ಲಾ ಶಾಸಕರ ಮತ್ತು ಸಚಿವರುಗಳನ್ನು ಭೇಟಿ ಮಾಡಿ ಖುದ್ದು ಮಾತನಾಡಿರುವ ಅರುಣ್ ಸಿಂಗ್, “ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರ ಮೇಲೆ ಹೈಕಮಾಂಡ್ಗೆ ವಿಶ್ವಾಸ ಇದೆ. ಮುಂದಿನ ದಿನಗಳಲ್ಲೂ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅರುಣ್ ಸಿಂಗ್, ” ಸರ್ಕಾರ, ಶಾಸಕರು, ಸಚಿವರು ಮತ್ತು ಸಿಎಂ ಯಡಿಯೂರಪ್ಪ ಹಗಲು ರಾತ್ರಿ ದುಡಿದಿದ್ದಾರೆ. ನಮಗೆ ಎಲ್ಲಾ ಶಾಸಕರು, ಸಂಸದರು ಒಂದೇ. ನಾಯಕತ್ವ ಬದಲಾವಣೆ ಬಗ್ಗೆ ಅವರು ಮಾತನಾಡುವುದು ಸಹಜ. ಆದರೆ, ಹೈಕಮಾಂಡ್ ಪ್ರತಿ ಬಾರಿಯೂ ಹೇಳಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ” ಎಂದು ತಿಳಿಸಿದ್ದಾರೆ.

error: Content is protected !!