ಕೂಗು ನಿಮ್ಮದು ಧ್ವನಿ ನಮ್ಮದು

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿದಕ್ಕೆ ಅಶ್ವತ್ಥ್ ನಾರಾಯಣ ವಾಗ್ದಾಳಿ

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಮೊದಲು ಎಲ್ಲಾ ಗೃಹಿಣಿಯರಿಗೆ ₹2 ಸಾವಿರ ಕೊಡ್ತೀವಿ ಎಂದಿದ್ದರು. ಆದರೆ ಈಗ ಗೃಹ ಲಕ್ಷ್ಮೀ ಯೋಜನೆಗೆ ಕಂಡಿಷನ್ ಹಾಕುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

APL, BPL ಮಹಿಳೆಯರಿಗೆ 2 ಸಾವಿರ ರೂ. ಕೊಡ್ತೀವಿ ಎಂದಿದ್ದರು. ಆದಾಯ ತೆರಿಗೆ ಪಾವತಿಸುತ್ತಿದ್ದರೆ ಹಣ ಸಿಗುವುದಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ನವರು ಮಾತಿಗೆ ತಪ್ಪುತ್ತಿರೋದು ಸರಿಯಲ್ಲ. ಮಹಿಳೆಯರು, ನಾಗರಿಕರ ಪರವಾಗಿ ನಾವು ಹೋರಾಟ ಮಾಡ್ತೇವೆ ಎಂದರು.

error: Content is protected !!