ಬೆಂಗಳೂರು: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಇವತ್ತು ಆಪ್ ನಾಯಕ ಮತ್ತು ದೆಹಲಿಯ ಮುಖ್ಯಂಮಂತ್ರಿ ಆಗಿರುವ ಅರವಿಂದ ಕೇಜ್ರಿವಾಲ್ ಅವರಿಂದ ಸದಸ್ಯತ್ವ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಮನೀಶ್ ಸಿಸೋಡಿಯಾ ಮತ್ತಿತರ ನಾಯಕರು ಉಪಸ್ಥಿತರಿದ್ರು. ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆಯನ್ನು ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದ್ರೆ ಈ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಸರ್ಕಾರ ರಾಜೀನಾಮೆ ಅಂಗೀಕರಿಸಿತ್ತು.
1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲೂ ಸಹ ಕೆಲಸ ನಿರ್ವಹಿಸಿದ್ದರು.