ಕೂಗು ನಿಮ್ಮದು ಧ್ವನಿ ನಮ್ಮದು

ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದಂತ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಹರಿಪ್ರಸಾದ್

ಬೆಂಗಳೂರು: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದಂತ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ. ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ B.K ಹರಿಪ್ರಸಾದ್ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ರು. ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ B.K ಹರಿಪ್ರಸಾದ್, K.S ಈಶ್ವರಪ್ಪ ಸೇರಿ ಕೆಲವು ಬಿಜೆಪಿ ನಾಯಕರು ರಾಷ್ಟ್ರ ಧ್ವಜಕ್ಕೆ ಅಪಮಾನಕಾರಿ ಹೇಳಿಕೆಯನ್ನು ಕೊಡುತ್ತಿದ್ದಾರೆ.

ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದಿಂದ ಅಪಮಾನ ಮಾಡುವ ಕೆಲಸ ಆಗುತ್ತಿದೆ. ಈಶ್ವರಪ್ಪ ಹೇಳಿಕೆ ರಾಷ್ಟ್ರ ವಿರೋಧಿಯಾಗಿದ್ದು, ಜಂಟಿ ಅಧಿವೇಶನದಲ್ಲಿ ನಿಯಮ ೫೯ರ ಅಡಿಯಲ್ಲಿ ನಿಲುವಳಿ ಸೂಚನೆ ಮೇಲೆ ಚರ್ಚೆ ಮಾಡುವುದಕ್ಕೆ ಅವಕಾಶ ಕೊಡಬೇಕೆಂದು ಕೇಳುತ್ತಿದ್ದೇವೆ ಎಂದ್ರು. ಹಿಜಾಬ್ ಗದ್ದಲ ದೊಡ್ಡದಾಗಿ ಮಾಡುತ್ತಿರುವುದು ದೊಡ್ಡ ಷಡ್ಯಂತ್ರ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿ ಮಾಡುವುದು ಅಷ್ಟು ಸರಿಯಲ್ಲ.

ಕೋರ್ಟ್ ಆದೇಶವನ್ನು ಅಧಿಕಾರಿಗಳು ಅವರದೇ ರೀತಿ ವಿಶ್ಲೇಷಣೆ ಮಾಡುತ್ತಿದ್ದಾರೆ, ಕಾಂಗ್ರೆಸ್ ಕಾರ್ಯಕರ್ತರು ಯಾವ ವಿದ್ಯಾರ್ಥಿನಿಯರನ್ನು ತಡೆಯಬಾರದು ಎಂದು ಹೋರಾಟ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಸಂಘ ಪರಿವಾರದವರ ಮಾತುಗಳನ್ನು ಕೇಳಿಕೊಂಡು ಮಕ್ಕಳ ಪ್ರವೇಶ ತಡೆಯಬಾರದೆಂಬುದು ನಮ್ಮ ಆಗ್ರಹವಾಗಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಆದ್ರೆ, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರನ್ನೂ ಬಂಧಿಸಲಾಗುತ್ತಿದೆ. ಎಂದು ಸರ್ಕಾರದ ವಿರುದ್ಧ B.K ಹರಿಪ್ರಸಾದ್ ಹರಿಹಾಯ್ದರು.

error: Content is protected !!