ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಹೊರಗಿಟ್ಟು ಸೋಮವಾರ ರಾಜ್ಯ ನಾಯಕ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದ ಒಳಹೊರಗು ಅರಿತಿರುವ ಮತ್ತು ಅನೇಕ ಚುನಾವಣೆಗಳನ್ನು ಮುನ್ನಡೆಸಿದ ಅನುಭವ ಹೊಂದಿರುವ ಯಡಿಯೂರಪ್ಪರನ್ನು ಬಿಟ್ಟು ಸಭೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಇದೇ ವಿಚಾರವಾಗಿ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ’ ಎಂದು ಟೀಕಿಸಿದೆ. ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನ. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ BSY ಅವರಿಗೆ ಸಭೆಯಲ್ಲಿ ಕುರ್ಚಿ ಇರಲಿಲ್ಲವೇ ಬಿಜೆಪಿ? ಟಿಕೆಟ್ ನಿರ್ಧರಿಸುವ ಸ್ವತಂತ್ರವಿಲ್ಲವೇ? BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಗೆ ಯಡಿಯೂರಪ್ಪ ಬೇಕಿರುವುದು ಓಟು ಗಳಿಕೆಗೆ ಮುಖ ತೋರಿಸಲು ಮಾತ್ರ!
ಟಿಕೆಟ್ ಹಂಚಿಕೆಯ ಸಭೆಗೆ ಮಾತ್ರ BSY ಹೊರಗೆ, ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷ್, ಸಿ.ಟಿ.ರವಿ, ಕಟೀಲು ಒಳಗೆ!
BSY ಅವರಿಗೆ ಈಗ ಮಾರ್ಗದರ್ಶಕ ಮಂಡಳಿಯೂ ಇಲ್ಲ, ಬಿಜೆಪಿಗೆ ಮಾರ್ಗದರ್ಶನ ಬೇಕಿಲ್ಲ.
BSYರ ರಾಜಕೀಯ ಬದುಕಿಗೆ ದುರಂತ ಅಂತ್ಯ ತೋರಿಸುತ್ತಿದೆ ಬಿಜೆಪಿ. ಬಿಜೆಪಿಗೆ ಯಡಿಯೂರಪ್ಪ ಬೇಕಿರುವುದು ಓಟು ಗಳಿಕೆಗೆ ಮುಖ ತೋರಿಸಲು ಮಾತ್ರ! ಟಿಕೆಟ್ ಹಂಚಿಕೆಯ ಸಭೆಗೆ ಮಾತ್ರ BSY ಹೊರಗೆ, ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷ್, ಸಿ.ಟಿ.ರವಿ, ನಳೀನ್ ಕುಮಾರ್ ಕಟೀಲು ಒಳಗೆ! BSY ಅವರಿಗೆ ಈಗ ಮಾರ್ಗದರ್ಶಕ ಮಂಡಳಿಯೂ ಇಲ್ಲ, ಬಿಜೆಪಿಗೆ ಮಾರ್ಗದರ್ಶನ ಬೇಕಿಲ್ಲ. BSYರ ರಾಜಕೀಯ ಬದುಕಿಗೆ ದುರಂತ ಅಂತ್ಯ ತೋರಿಸುತ್ತಿದೆ ಬಿಜೆಪಿ’ ಎಂದು ಕಾಂಗ್ರೆಸ್ ಕುಟುಕಿದೆ.