ಚಾಮರಾಜನಗರ: ಸಚಿವ ಸಂಪುಟ ರಚನೆಯಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ರು. ಇನ್ನೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಾತನಾಡಿರುವ ಅವರು, ಕೆಲವು ದಿನಗಳಲ್ಲೇ ಸಚಿವ ಸಂಪುಟ ರಚನೆಯಾಗಲಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಜೊತೆಗೆ ಕೇಂದ್ರದ ನಾಯಕರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದಿದ್ದಾರೆ.
ಇನ್ನೂ ತಂದೆಯಂತೆ ಮಗ ಆಗುವುದಿಲ್ಲ ಎಂದು ಬೊಮ್ಮಾಯಿ ಅವರ ಬಗ್ಗೆ ಸಿದ್ದರಾಮಯ್ಯ ಮಾತನಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿ.ಎಸ್. ಯಡಿಯೂರಪ್ಪನವರು, ಇತ್ತೀಚಿಗೆ ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಎಂದು ಬಿ.ಎಸ್.ವೈ ಟಾಂಗ್ ನೀಡಿದ್ದಾರೆ. ಇನ್ನೂ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯಾನವರಿಗೆ ಇದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇನ್ನೂ ನೂತನ ಮುಖ್ಯಮಂತ್ರಿ ಜನಪರ ಕಾರ್ಯಕ್ರಮಗಳನ್ನು ನೀಡಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪನವರು ಶ್ಲಾಘಿಸಿದ್ರು.