ದಾವಣಗೆರೆ: ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಹಮ್ಮಿಕೊಂಡಿದ್ದ ಪಾದಯಾತ್ರೆ ಶಾಪದಿಂದ ಮಾಜಿ ಮುಖ್ಯಮಂತ್ರಿ ಬಿಎಸ್ವೈ ತಮ್ಮ ಅಧಿಕಾರ ಕಳೆದುಕೊಂಡ್ರು ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಶಾಪದ ಹೇಳಿಕೆಯನ್ನು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದರುವ ವಿಜಯಾನಂದ, ಪಾದಯಾತ್ರೆ ಸಂದರ್ಭದಲ್ಲಿ ನಾನು ಹೇಳಿಕೆ ನೀಡಿದ್ದೆ ೨ಎ ಮೀಸಲಾತಿಗಾಗಿ ಶ್ರೀಗಳಿಗೆ ಪಾದಯಾತ್ರೆ ಮಾಡುವಂತೆ ಮಾಡಿದ್ರು. ಆದರೂ, ಅವರು ನೀಡಿದ ಮಾತನ್ನು ಉಳಿಸಿಕೊಳ್ಳಲಿಲ್ಲ. ಅದೇ ಕಾರಣಕ್ಕೆ ಶ್ರೀಗಳ ಪಾದಯಾತ್ರೆ ಶಾಪ ಅವರಿಗೆ ತಟ್ಟಿದೆ.
ಕೊಟ್ಟ ಮಾತನ್ನು ಉಳಿಸಿಕೊಳ್ಳದಿದ್ರೆ ಯಾರಾದ್ರು ಸರಿ ಅಂತವರಿಗೆ ಶಾಪ ತಟ್ಟುತ್ತದೆ ಎಂದು ಕಾಶಪ್ಪನವರ್ ಪರೋಕ್ಷವಾಗಿ ಮುಖ್ಯಮಂತ್ರಿ ಬೊಮ್ಮಾಯಿಗೆ ಶಾಪದ ಎಚ್ಚರಿಕೆ ನೀಡಿದ್ದಾರೆ.
ವಚನಾನಂದ ಸ್ವಾಮೀಜಿಗೆ ಟಾಂಗ್ ನೀಡಿದ ಕಾಶಪ್ಪನವರ್, ವಚನಾನಂದ ಸ್ವಾಮೀಜಿ ಸಾಫ್ಟ್ ವೇರ್ ನಾವು ಹಾರ್ಡ್ವೇರ್, ಅವರು AC ರೂಮ್ ನಲ್ಲಿ ಕೂತು ಹೋರಾಟ ಮಾಡುತ್ತಾರೆ ನಾವು ಬಿಸಿಲಲ್ಲಿ ಕೂತು ಹೋರಾಟ ಮಾಡುತ್ತೇವೆ. ಹೋರಾಟಕ್ಕೆ ಬಂದ್ರೆ ಸ್ವಾಗತ ಮಾಡುತ್ತೇವೆ ಯಾವಾಗ ಹೋಗುತ್ತಾರೋ ಅವಾಗ ಬಿಳ್ಕೋಡುಗೆ ಕೊಡುತ್ತೇವೆ ಎಂದು ವಿಜಯಾನಂದ ಕಾಶಪ್ಪನವರ ಹೇಳಿದರು.