ಕೂಗು ನಿಮ್ಮದು ಧ್ವನಿ ನಮ್ಮದು

ಚುನಾವಣೆಯತ್ತ ಚಿತ್ತ: ಆಗಸ್ಟ್ 28ರಿಂದ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ತುರುಸುಗೊಂಡಿದ್ದು, ಇದೇ ತಿಂಗಳು 21ರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒಳಗೊಂಡಂತೆ ಪ್ರಮುಖ ನಾಯಕರ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್‌ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ ನಡೆಯಲಿದೆ.

ಇದಕ್ಕೆ ಸಂಬಂಧಪಟ್ಟಂತೆ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳವಾರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆದಿದ್ದು, ಇವತ್ತು ಮೈಸೂರು ವಿಭಾಗದ ಸಭೆ ನಡೆದಿದೆ ಎಂದು ವರದಿ ವಿವರಿಸಿದೆ. ಇದೆಲ್ಲದರ ಜೊತೆಗೆ ಸರಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲು ನಾಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದಿಲ್ಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

error: Content is protected !!