ಕೂಗು ನಿಮ್ಮದು ಧ್ವನಿ ನಮ್ಮದು

ಮಸೀದಿಗಳಿಗೆ ಶ್ರೀರಾಮುಲು ದೇಣಿಗೆ, ಇದು ಓಲೈಕೆ ರಾಜಕಾರಣ ಎಂದ ಮುಸ್ಲಿಮರು

ಬಳ್ಳಾರಿ: ಜಿಲ್ಲೆಯ ಮಸೀದಿಗಳಿಗೆ ಸಚಿವ ಶ್ರೀರಾಮುಲು ಇಪ್ಪತ್ತು ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದ ವಿಚಾರ ಈಗ ಚರ್ಚೆಗೆ ಗ್ರಾಸವಾಗುತ್ತಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ನಿರ್ಣಾಯಕರಾಗಿದ್ದಾರೆ. ಕೌಲಬಜಾರ ವ್ಯಾಪ್ತಿಯಲ್ಲಿ ಬರುವ ಒಂಬತ್ತು ವಾರ್ಡ್‍ಗಳಲ್ಲಿ ಅತಿ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ. ಹಾಗಾಗಿ ಒಂದೊಂದು ಮಸೀದಿಗೆ ಇಪ್ಪತ್ತು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಮುಸ್ಲಿಂ ಮತದಾರರ ಒಲೈಕೆ ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಹಿಜಾಬ್, ಹಲಾಲ್, ಸಿಎಎ ಗಲಾಟೆ ವೇಳೆ ಮುಸ್ಲಿಂ ಪರ ಮಾತನಾಡದ ನಾಯಕರು ಇದೀಗ ಒಲೈಕೆ ರಾಜಕಾರಣ ಮಾಡುತ್ತಿದ್ದಾರೆಂದು ಮುಸ್ಲಿಂ ಮುಖಂಡರು ಆರೋಪಿಸಿದ್ದಾರೆ. ಶ್ರೀರಾಮುಲು ಈ ಬಗ್ಗೆ ಮಾತನಾಡಿ, ದೇಣಿಗೆ ನಾನು ಕೊಟ್ಟಿಲ್ಲ. ದಾನಿಗಳು ನನ್ನ ಮೂಲಕ ಕೊಡಿಸಿದ್ದಾರೆಂದು ಹೇಳುತ್ತಿದ್ದಾರೆ. ಧರ್ಮದ ಕೆಲಸ ಈ ಕೈಕೊಟ್ಟಿದ್ದು ಮತ್ತೊಂದು ಕೈಗೆ ಕಾಣಬಾರದು. ನಾನು ಒಂದು ರೂಪಾಯಿಯನ್ನು ಕೊಟ್ಟಿಲ್ಲ. ಬೇರೆಯವರ ಕೈಯಿಂದ ಕೊಡಿಸಿದ್ದೇನೆ. ನನ್ನ ಮೂಲಕ ದೇಣಿಗೆ ದೇವಸ್ಥಾನ, ಮಸೀದಿಗೆ ಮುಟ್ಟುತ್ತದೆ ಅಂದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. 

error: Content is protected !!