ಕೂಗು ನಿಮ್ಮದು ಧ್ವನಿ ನಮ್ಮದು

ರಮೇಶ್ ಜಾರಕಿಹೊಳಿಯವರನ್ನೇ ಸಚಿವರನ್ನಾಗಿ ಮಾಡಲು ಪ್ರಯತ್ನ ಮಾಡುತ್ತೇವೆ! ನಾನು ಸಚಿವ ಸ್ಥಾನಕ್ಕೆ ಕ್ಲೇಮ್ ಮಾಡಿಲ್ಲ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ನಾನು ಸಚಿವ ಸ್ಥಾನಕ್ಕೆ ಕ್ಲೇಮ್ ಮಾಡಿಲ್ಲ. ನಮ್ಮ ಪಾಡಿಗೆ ನಾನು ಕೆಎಂಎಫ್ ಅಧ್ಯಕ್ಷನಾಗಿ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾರೂ ಸಹ ನನಗೆ ಸಚಿವ ಸ್ಥಾನ ಆಫರ್ ಮಾಡಿಲ್ಲ. ನಾಳೆ ಶಾಸಕ ರಮೇಶ್ ಜಾರಕಿಹೊಳಿ‌ ಗೋಕಾಕ್‌ಗೆ ಆಗಮಿಸಲಿದ್ದು, ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಕೆಲವು ವಿಷಯಗಳನ್ನು ಸ್ಪಷ್ಟಪಡಿಸುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಗೋಕಾಕ ನಗರದಲ್ಲಿ ಸ್ಪಷ್ಟಪಡಿಸಿದರು.

ದೆಹಲಿಯಿಂದ ಬೆಂಗಳೂರಿಗೆ ರಮೇಶ್ ಜಾರಕಿಹೊಳಿ‌ ವಾಪಸ್ ಆಗಿದ್ದಾರೆ. ರಾಜಕಾರಣದಲ್ಲಿ ಅಸಮಾಧಾನ, ಬೇಜಾರು ಇದ್ದೇ ಇರುತ್ತದೆ. ಆದರೆ ಅದರಿಂದ ಅಂತಹ ಸಮಸ್ಯೆಯಾಗಿಲ್ಲ. ರಮೇಶ್ ಜಾರಕಿಹೊಳಿ‌ ಮರಳಿ ಮಂತ್ರಿ ಆಗಬೇಕೆಂದು ನಮ್ಮೆಲ್ಲರ ಆಸೆ. ಪಕ್ಷದಲ್ಲಿರುವ ಕೆಲವರು ಬೆನ್ನಿಗೆ ಚೂರಿ ಹಾಕಿದ ಬಗ್ಗೆ ಗೊತ್ತಿಲ್ಲ, ಅವರೇ ಮಾತನಾಡಿದ್ದಾರೆ. ರಮೇಶ್ ಜಾರಕಿಹೊಳಿಯವರನ್ನೇ ಸಚಿವರನ್ನಾಗಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಗೋಕಾಕ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ತಿಳಿಸಿದರು.

error: Content is protected !!