ಕೂಗು ನಿಮ್ಮದು ಧ್ವನಿ ನಮ್ಮದು

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಬೆಲ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆ ಏರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ಗೆ ಸೇರಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಇವತ್ತು ತಮ್ಮ ನಿವಾಸದ ಹತ್ತಿರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಪಿ.ಎಫ್.ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.


ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು. 

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು. ಇವತ್ತು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತೇದ್ದೇನೆ ಎಂದರು.

error: Content is protected !!