ಕೂಗು ನಿಮ್ಮದು ಧ್ವನಿ ನಮ್ಮದು

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾದ ರಾಜ್‌ ಕುಟುಂಬ, ಅಣ್ಣಾವ್ರ ಸಮಾಧಿ ಅಭಿವೃದ್ಧಿ ಸಂಬಂಧ ಚರ್ಚೆ

ನಟ ರಾಘವೇಂದ್ರ ರಾಜ್‌ ಕುಮಾರ್, ಹಾಗೂ ಅಶ್ವಿನಿ ಪುನೀತ್ ರಾಜ್‌ ಕುಮಾರ್ ಸೇರಿದಂತೆ ರಾಜ್‌ ಕುಮಾರ್ ಕುಟುಂಬದ ಸದಸ್ಯರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇವತ್ತು ಬೆಂಗಳೂರಿನ ರೇಸ್‌ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವರನಟ ಡಾ. ರಾಜ್‌ ಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜ್‌ ಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು.

error: Content is protected !!