ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಇದು ವಿಷ್ಣು ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಫ್ಯಾನ್ಸ್ ಬಯಕೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು ಮತ್ತು ಭಾವನೆಗಳಿಗೆ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ’ ಎಂದು ಹೇಳಿದ್ದಾರೆ.