ಹೆಚ್ಡಿಕೆ ನಿವೃತ್ತಿಯಾಗುವ ವಯಸ್ಸಲ್ಲ, ಇನ್ನೂ ಸೇವೆ ಮಾಡಬೇಕಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೆಯುತ್ತಿರುತ್ತವೆ.
ರಾಜ್ಯದ ಜನರು ಪ್ರಬುದ್ಧರಾಗಿದ್ದಾರೆ, ಎಲ್ಲವನ್ನೂ ಗಮನಿಸುತ್ತಾರೆ. ಮುಂದಿನ ಚುನಾವಣೆ ವೇಳೆಗೆ ಇನ್ನೂ ಪ್ರಬುದ್ಧರಾಗುತ್ತಾರೆ. ನಾವು ಮಾತನಾಡುವಾಗ ಅದರ ಹಿಂದಿರುವ ಕಲ್ಪನೆ ಇರಬೇಕು. ರಾಜ್ಯದಲ್ಲಿ ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ, ಅಮಿತ್ ಶಾ ಸೇರಿ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ನಾಯಕರು ರಾಜ್ಯಕ್ಕೆ ಬರ್ತಾರೆ ಎಂದು ಸಿಎಂ ತಿಳಿಸಿದರು.