ಬೆಳಗಾವಿಗೆ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಂಸದರು, ಶಾಸಕರು, ಪರಾಜಿತ ಅಭ್ಯರ್ಥಿಗಳಿಗೂ ಸಭೆಗೆ ಆಹ್ವಾನಿಸಲಾಗಿದೆ.
ಸೋಲಿನ ಪರಾಮರ್ಶೆ ಜತೆ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ಪಕ್ಷ ಸಂಘಟನೆ ಕುರಿತು ಮಾಜಿ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ.