ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧಾರ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ‘ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇದನ್ನು ಮಾಡುತ್ತಿದ್ದಾರೆ. ಅವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು, ಮಾಡಿಕೊಳ್ಳಲಿಲ್ಲ.
ಮುಂಗಾರು ವಿಫಲವಾಗಿರುವ ಕಾರಣ ಕೇಂದ್ರ ಸರ್ಕಾರ ತನ್ನದೇ ನೀತಿ ಮಾಡಿದ್ದಾರೆ.ಕೇವಲ ಕರ್ನಾಟಕಕ್ಕೆ ಮಾತ್ರ ಮಾಡಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಿಗೂ ಅದು ಅನ್ವಯಿಸುತ್ತದೆ. ನಮ್ಮ ರೈತರಿಂದಲೇ ಖರೀದಿ ಮಾಡಿ, ಯಾಕೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದೀರಿ?, ನೀವು ಕೊಡದೇ ಇದ್ದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.