ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮೃಣಾಲ ಹೆಬ್ಬಾಳಕರ್ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಮಗೆ ಟಿಕೆಟ್ ನೀಡಿರುವುದಕ್ಕೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್, ಇಬ್ಬರ ಆಶಿರ್ವಾದ ಪಡೆದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಇಬ್ಬರೂ ಮೃಣಾಲ ಹೆಬ್ಬಾಳಕರ್ ಅವರನ್ನು ಆಶಿರ್ವದಿಸಿ, ಶುಭ ಕೋರಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.