ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿಯಲ್ಲಿ ಬಸ್ ಸಂಚಾರ ಆರಂಭ: ಕೋವಿಡ್ -19 ಮಾರ್ಗಸೂಚಿ ಪಾಲನೆ ಕಡ್ಡಾಯ

ಬೆಳಗಾವಿ:ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದಿಂದ ಜೂನ್ ‌21ರಿಂದ ಬಸ್ಸುಗಳ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ವಾ.ಕ.ರಾ.ಸಾ.ಸಂಸ್ಥೆಯ ಬೆಳಗಾವಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದ್ದಾರೆ.

ಕೋವಿಡ್ -19 ಹರಡುವಿಕೆಯನ್ನು ತಡೆಗಟ್ಟಲು
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಮೈಸೂರು ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಸಡಿಲಿಸಿ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಶೇಕಡ 50 ರಷ್ಟು ಆಸನ
ಸಾಮರ್ಥ್ಯದೊಂದಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಅನುಮತಿ ನೀಡಿದೆ.

ಆದ್ದರಿಂದ, ವಾ.ಕ.ರ‌.ಸಾ.ಸಂಸ್ಥೆಯ ಬೆಳಗಾವಿ ವಿಭಾಗವು ಜೂನ್ 21 ರಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲೆ ಹೊರತುಪಡಿಸಿ ಬೆಳಗಾವಿಯಿಂದ ಧಾರವಾಡ, ಹುಬ್ಬಳ್ಳಿ, ಬಾಗಲಕೋಟ, ರಾಮದುರ್ಗ, ಬೈಲಹೊಂಗಲ್,
ಗೋಕಾಕ, ವಿಜಯಪೂರ, ಚಿಕ್ಕೋಡಿ, ನಿಪ್ಪಾಣಿ,
ಖಾನಾಪೂರ ಒಳಗೊಂಡಂತೆ ರಾಜ್ಯದ ಇತರೆ ಜಿಲ್ಲೆಗಳಿಗೆ ಪ್ರಯಾಣಿಕರ ಜನದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಮತ್ತು ದೂರ ಮಾರ್ಗದ ಅಂತರ ಜಿಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಂತರಾಜ್ಯ ಮಾರ್ಗಗಳ ಕಾರ್ಯಾಚರಣೆಯ ಬಗ್ಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ವಾ.ಕ.ರಾ.ಸಾ.ಸಂಸ್ಥೆಯ ಬೆಳಗಾವಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ಪ್ರಕಟಣೆಯಲ್ಲಿ ಕೋರಿದ್ದಾರೆ.


error: Content is protected !!