ಗದಗ: ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆ ಗದಗ ಜಿಲ್ಲಾ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನೊಂದೆಡೆ ಅಭ್ಯರ್ಥಿಗಳ ಆಯ್ಕೆಗಾಗಿ ರಾಜ್ಯಾದ್ಯಂತ ವಿಧಾಸಭೆ ಕ್ಷೇತ್ರಗಳ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಈ ಕಾರಣದಿಂದಾಗಿ ಹುಬ್ಬಳ್ಳಿ ರಸ್ತೆಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ಕಚೇರಿ ತುಂಬಿ ತುಳುಕುತ್ತಿದೆ. ಮಾಜಿ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಕ್ಷೇತ್ರವಾರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದ್ದು, ಆಯಾ ಕ್ಷೇತ್ರಗಳ ಪ್ರಮುಖರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.
ಗದಗ ನಗರ, ನರಗುಂದ, ಶಿರಹಟ್ಟಿ ಮೀಸಲು, ರೋಣ ವಿಧಾನಸಭೆ ಆಕಾಂಕ್ಷಿಗಳ ಅಭಿಪ್ರಾಯಗಳನ್ನು ಗುಪ್ತವಾಗಿ ಸಂಗ್ರಹ ಮಾಡಲಾಗುತ್ತಿದೆ. ಬಳಿಕ ಈ ಅಭಿಪ್ರಾಯವನ್ನು ಬಿಜೆಪಿ ಕೇಂದ್ರ ಚುನಾವಣೆ ಸಮಿತಿಗೆ ರವಾನಿಸಲಾಗುತ್ತದೆ. ಬಿಜೆಪಿ ಕಚೇರಿ ಆವರಣದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಬೀಡುಬಿಟ್ಟಿದ್ದಾರೆ.