ಪಣಜಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಫೋಬಿಯಾದಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕೆ ಮಾಡಿದ್ದಾರೆ. ಗೋವಾದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್‍ನ ಗಾಂಧಿ ಪರಿವಾರವು ಗೋವಾವನ್ನು ತಮ್ಮ ಪ್ರವಾಸದ ತಾಣವಾಗಿ ಪರಿಗಣಿಸುತ್ತದೆ.
ಆದ್ರೆ ಬಿಜೆಪಿಯ ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ Golden Goa ಕನಸನ್ನು ನನಸು ಮಾಡಿದ್ದಾರೆ ಎಂದು ತಿಳಿಸಿದ್ರು. ಬಿಜೆಪಿಯಿಂದ ಮಾತ್ರ ಗೋವಾದ ಅಭಿವೃದ್ಧಿಯನ್ನು ಮಾಡಲು ಸಾಧ್ಯ. ನಿಮಗೆ ಬಿಜೆಪಿಯ Golden Goa ಬೇಕಾ ಅಥವಾ ಕಾಂಗ್ರೆಸ್‍ನ ಗಾಂಧಿ ಪರಿವಾರದ Goa ಬೇಕೋ ಎಂಬುದನ್ನು ನೀವೇ ತೀರ್ಮಾನ ಮಾಡಿಕೊಳ್ಳಿ ಎಂದು ಅಮಿತ್ ಶಾ ಹೇಳಿದ್ರು.
ಗೋವಾ ಚುನಾವಣೆಯಲ್ಲಿ ಈ ಬಾರಿ ಟಿಎಂಸಿ, ಆಪ್, ಎನ್‍ಸಿಪಿ ಪಕ್ಷಗಳು ತಮ್ಮ ನೆಲೆಯನ್ನು ವಿಸ್ತರಿಕೊಳ್ಳಲು ಅಥವಾ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಮಾನ್ಯತೆಗಾಗಿ ಸ್ಪರ್ಧಿಸುತ್ತಿವೆ. ಈ ಪಕ್ಷಗಳಿಂದ ಗೋವಾದಲ್ಲಿ ಸರ್ಕಾರ ರಚನೆ ಅಸಾಧ್ಯ. ಬಿಜೆಪಿಯಿಂದ ಮಾತ್ರವೇ ಸರ್ಕಾರ ರಚನೆ ಮಾಡಬಹುದು. ರಾಜಕೀಯ ಸ್ಥಿರತೆ ಇರದಿದ್ದರೆ, ಅಭಿವೃದ್ಧಿ ನಿರೀಕ್ಷೆ ಸಾಧ್ಯವೇ ಇಲ್ಲ ಎಂದು ಅಮಿತ್ ಶಾ ಎಂದರು.