5 ವರ್ಷ ಸಿದ್ದರಾಮಯ್ಯ ಸಿಎಂ ಎಂದು ಎಂ.ಬಿ.ಪಾಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಪಕ್ಷ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಎಂ.ಬಿ.ಪಾಟೀಲ್ ಈ ಹೇಳಿಕೆ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ ಅಷ್ಟೇ.
ಬಹುಮತ ದೊರಕಿದ ನಂತರದ ಎಲ್ಲ ಬೆಳವಣಿಗೆ ಗಮನಿಸಿದಾಗ ಈ ಸರ್ಕಾರ ಸುಸ್ಥಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೈಕಮಾಂಡ್ಗೆ ಕಪ್ಪ ಪೂರೈಸಬೇಕಾದ ಮಾನದಂಡದಲ್ಲಿ ಈ ಸರ್ಕಾರ ರಚನೆಯಾಗಿದೆ ಎಂದು ಟ್ವೀಟ್ ಮೂಲಕ ಬಿಜೆಪಿ, ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದೆ