ಕೂಗು ನಿಮ್ಮದು ಧ್ವನಿ ನಮ್ಮದು

ದತ್ತಿನಿಧಿ ಪ್ರಶಸ್ತಿಗಾಗಿ ಪುಸ್ತಕಗಳ ಅರ್ಜಿ ಆಹ್ವಾನ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಾಗಿ ಪುಸ್ತಕಗಳನ್ನು ಕಳುಹಿಸಲು ಅರ್ಜಿ ಆಹ್ವಾನಿಸಲಾಗಿದೆ.

2020 ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುವ ವಿವಿಧ ದತ್ತಿನಿಧಿ ಪ್ರಶಸ್ತಿಗಾಗಿ ಜುಲೈ. 05 ರ ಒಳಗಾಗಿ ಪುಸ್ತಕಗಳನ್ನು “ಕನ್ನಡ ಸಾಹಿತ್ಯ ಪರಿಷತ್ತು ಪಂಪಾಮಹಾಕವಿ ರಸ್ತೆ ಚಾಮರಾಜಪೇಟೆ ಬೆಂಗಳೂರು-560018” ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.

ಬಿಸಲೇರಿ ಜಯಣ್ಣ ಮತ್ತು ಬಿಸ್ಲೇರಿ ಬ್ರದರ್ಸ ದತ್ತಿ, ಶ್ರೀಮತಿ ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ, ಭಾರತಿ ಮೋಹನ್ ಕೋಟಿ ದತ್ತಿ ಅನುವಾದ ಸಾಹಿತ್ಯಕ್ಕಾಗಿ, ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ. ಮದನಕೇಸರಿ ಜೈನ ದತ್ತಿ, ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ, ವಸುದೇವ ಭೂಪಾಲಂ ಕತ್ತಿ, ದಿವಂಗತ ಡಿ. ಮಾಣಿಕರಾವ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿ ಮತ್ತು ಡಾ. ಎ. ಎಸ್ ಧರಣೇಂದ್ರಯ್ಯ- ಮನೋವಿಜ್ಞಾನ ದತ್ತಿ, ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿ, ಲಕ್ಷ್ಮೀದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿ, ಪ್ರಕಾಶಕ ಆರ್.ಎನ್.ಹಬ್ಬು ದತ್ತಿ ಪ್ರಶಸ್ತಿ , ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿ, ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ, ಗುಬ್ಬಿ ಸೋಲುವುದು ಮುರುಗಾರಾಧ್ಯ ದತ್ತಿ ಪ್ರಶಸ್ತಿ, ಗುರುಭಟ್ ದತ್ತಿ. ಇನ್ನಿತರ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಎಲ್ಲ ಸ್ಪರ್ಧೆಗಳಿಗೂ ಅನ್ವಯಿಸುವ ನಿಯಮಗಳು:

ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಕಳುಹಿಸಬೇಕು. ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ

ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸ್ಸನ್ನು ಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಯಾವುದೇ ಪ್ರಶಸ್ತಿಗೆ ಅರ್ಹ ಗ್ರಂಥಗಳು ಬಾರದಿದ್ದಾಗ ಆ ವರ್ಷ ಪ್ರಶಸ್ತಿಯನ್ನು ನೀಡದಿರುವ ಹಕ್ಕು ಪರಿಷತ್ತಿಗೆ ಇರುತ್ತದೆ. ಒಂದಕ್ಕಿಂತ ಹೆಚ್ಚು ಗ್ರಂಥಗಳು ಅತ್ಯುತ್ತಮವೆಂದು ಪರಿಗಣಿತವಾದರೆ, ಬಹುಮಾನದ ಹಣವನ್ನು ಹಂಚಿ ವಿತರಿಸುವ ಹಕ್ಕು ಪರಿಷತ್ತಿಗೆ ಇರುತ್ತದೆ.

ಪಿ.ಎಚ್.ಡಿ ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಭಾಗವಹಿಸುತ್ತಿರುವ ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸಬೇಕು.

ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ಪರಿಷತ್ತಿನ ಅಂತರ್ಜಾಲ ತಾಣ www.kasapa.in ನಿಂದ ಪಡೆಯಬಹುದು ಅಥವಾ ದೂ. 080-26612991, 080-26623584 ಗೆ ಸಂಪರ್ಕಿಸಬಹುದೆಂದು ತಿಳಿಸಿದೆ.

error: Content is protected !!