ಕೂಗು ನಿಮ್ಮದು ಧ್ವನಿ ನಮ್ಮದು

ತಪ್ಪು ಅರಿವಾಗಿ ಪಕ್ಷಕ್ಕೆ ಮರಳಿದರೆ ಶೆಟ್ಟರ್, ಸವದಿಗೆ ಸ್ವಾಗತ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಪಕ್ಷ ಸ್ಥಾನಮಾನ ನೀಡಿದೆ.ರಾಜ್ಯಾದ್ಯಂತ ಸುತ್ತಾಡಿ ಇವರ ಬಂಡವಾಳ ಬಯಲು ಮಾಡುತ್ತೇನೆ. ಮತ್ತೆ ನಿಮಗೆ ಅಧಿಕಾರ ಕೊಡಲ್ಲ ಎಂದು ಶೆಟ್ಟರ್ಗೆ ಹೇಳಿದ್ದೀವಾ? ನಿಮ್ಮನ್ನು ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದರು.

ಕೇಂದ್ರಕ್ಕೆ ಬನ್ನಿ ಮಂತ್ರಿ ಮಾಡುತ್ತೇವೆ ಎಂದು ಪ್ರಧಾನ್ ಹೇಳಿದ್ದರು. ಆದರೆ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಜಗದೀಶ್ ಶೆಟ್ಟರ್ಗೆ ಒಳ್ಳೆಯದಾಗಲಿ, ಇನ್ನು ಹೆಚ್ಚಾಗಿ ಮಾತಾಡಲ್ಲ. ಒಂದು ವೇಳೆ ಅವರಿಗೆ ತಪ್ಪು ಅರಿವಾಗಿ ಪಕ್ಷಕ್ಕೆ ಮರಳಿದರೆ ಸ್ವಾಗತ.

ನಾನೇ ಮುಂದೆ ನಿಂತು ಶೆಟ್ಟರ್, ಸವದಿಯನ್ನು ಸ್ವಾಗತ ಮಾಡುವೆ. ಪಕ್ಷದಲ್ಲಿ ಅವರಿಗೆ ಸ್ಥಾನಮಾನ ನೀಡುವುದು ನಮ್ಮ ಜವಾಬ್ದಾರಿ ಎಂದು ಬಿಎಸ್ ಯಡಿಯೂರಪ್ಪ ಮಾತನಾಡಿದರು

error: Content is protected !!