ಚಳ್ಳಕೆರೆ ಪಟ್ಟಣದಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ನೆಹರು ವೃತ್ತದಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಲಾಗಿರುವ ಘಟನೆ ನಡೆದಿದೆ. ರಾಯದುರ್ಗ – ಬೆಂಗಳೂರು ಬಸ್ ನಿರ್ವಾಹಕ ಚಂದ್ರೇಗೌಡ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ.
ಚಳ್ಳಕೆರೆಯಿಂದ ದಾಬಸ್ ಪೇಟೆಗೆ ತೆರಳುತ್ತಿದ್ದ ಮಹಿಳೆಗೆ ದಾಬಸಪೇಟೆ ಬಳಿ ಬಸ್ ನಿಲ್ಲಿಸಲು ನಿರಾಕರಿಸಿದ್ದು ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ.