ಬೆಂಗಳೂರು: ಕೋರೊನಾ ೩ನೇ ಅಲೆ ಹೋಗಿಸಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ ೮೦೦ ಕೋಟಿ ರೂಪಾಯಿ ಮಂಜೂರು ಮಾಡಲು ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿಯವರು ತಿಳಿಸಿದ್ರು. ಇನ್ನೂ ಬಸವರಾಜ್ ಬೊಮ್ಮಾಯಿಯವರು ಇವತ್ತು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯರವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ರು.
ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿಯವರು, ಈಗಾಗಲೆ ರಾಜ್ಯಕ್ಕೆ ೧.೫ ಕೋಟಿ ಲಸಿಕೆಯನ್ನು ಪೂರೈಸಲು ಕೋರಿಕೆ ಸಲ್ಲಿಸಿಲಾಗಿದೆ. ಜೊತೆಗೆ ೧ ಕೋಟಿ ಲಸಿಕೆಯನ್ನು ಪೂರೈಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ರು. ಇನ್ನೂ ಇದರಿಂದ ರಾಜ್ಯದಲ್ಲಿ ಪ್ರತಿನಿತ್ಯವೂ ೨ ರಿಂದ ೩ ಲಕ್ಷ ಲಸಿಕೆಗಳನ್ನು ಒದಗಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಜೊತೆಗೆ ಕೋರೊನಾ ೩ನೇ ಅಲೆಯ ನಿಯಂತ್ರಣ, ಲಸಿಕೆ ಅಭಿಯಾನ ಮತ್ತು ನೆರೆ ರಾಜ್ಯವಾದ ಕೇರಳದಲ್ಲಿ ಹೆಚ್ಚುತ್ತಿರುವ ಕೋರೊನಾ ದಿಂದ ರಾಜ್ಯದ ಸರಹದ್ದು ಪ್ರವೇಶ ನಿಯಂತ್ರಿಸುವ ಕುರಿತು ಮಾರ್ಗಸೂಚಿಯನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವರು ನನಗೆ ತಿಳಿಸಿದ್ದಾರೆಂದು ಸಿಎಂ ಬಸವರಾಜ್ ಬೊಮ್ಮಾಯಿಯವರು ತಿಳಿಸಿದರು.