ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿದೆ. ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕಿನ ಜಲದುರ್ಗ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಓರ್ವನ ಕಾಲು ಮುರಿದಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಅಪಘಾತಕ್ಕಿಡಾದ ಮಂಡ್ಯ ಮೂಲದ ನಾಲ್ವರು ಮುರುಡೇಶ್ವರ ಕಡೆಗೆ ಹೋಗುತ್ತಿದ್ದರು ಎನ್ನಲಾಗಿದ್ದು, ಜಯಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.