ಕೂಗು ನಿಮ್ಮದು ಧ್ವನಿ ನಮ್ಮದು

ಕಾಡು ಹಂದಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು: ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ

ಚಿತ್ರದುರ್ಗ: ಕಾಡು ಹಂದಿಯೊಂದು ರಸ್ತೆ ದಾಟುವಾಗ ಕಾರಿಗೆ ಡಿಕ್ಕಿಯಾದ ರಭಸಕ್ಕೆ ಕಾಡು ಹಂದಿ ಹಾಗೂ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ರಾತ್ರಿ ನಡೆದಿದೆ.

ಬೆಂಗಳೂರು ಕಡೆಯಿಂದ ಚಿತ್ರದುರ್ಗ ಮಾರ್ಗವಾಗಿ ದಾವಣಗೆರೆಯಲ್ಲಿ ನಡೆಯುತ್ತಿರಿವ ದುರ್ಗಾಂಬಿಕ ದೇವಿಯ ಜಾತ್ರೆಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಭೀಕರ ರಸ್ತೆ ಅಪಘಾತಕ್ಕೆ ಮೃತ ದೇಹ ರಸ್ತೆಯಲ್ಲಿ ಛಿದ್ರ ಛಿದ್ರಗೊಂಡಿದೆ ಎನ್ನಲಾಗಿದೆ.

ಇನ್ನು ಮೃತರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದವರು ಒಂದೇ ಕುಟುಂಬದವರು ಎನ್ನಲಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ತಕ್ಷಣ ಡಿವೈಎಸ್ಪಿ ರೋಷರ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ ಸೇರಿದಂತೆ ಸ್ಥಳಕ್ಕೆ ಐಮಂಗಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಐಮಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!