ಕೂಗು ನಿಮ್ಮದು ಧ್ವನಿ ನಮ್ಮದು

ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್ಮೆಂಟ್ ನಡೆದಿದೆ. ಹೈದರಾಬಾದ್ನಲ್ಲಿ ಎಂಗೇಜ್ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು. ಲಾವಣ್ಯ ಹಾಗೂ ವರುಣ್ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

error: Content is protected !!