ಚಿತ್ರದುರ್ಗ: ಜಿಲ್ಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದ ಬಳಿ ಕಳಪೆ ಕಾಮಾಗಿರಿಯಿಂದ ಕೂಡಿದ ಚೆಕ್ ಡ್ಯಾಮ್ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿಬಂದಿದೆ. 70 ಲಕ್ಷ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ಕಾಮಗಾರಿ ನಡೆಯುತ್ತಿದೆ.
ಗ್ರಾಮದ ಬಳಿ ಈಗಾಗಲೆ ನಿರ್ಮಿಸಿರುವ ಹಳೇ ಚೆಕ್ ಡ್ಯಾಂ ಬಳಿಯೇ ಈಗ ಮತ್ತೊಂದು ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿದ್ದು, ಈ ಕಾಮಗಾರಿ ಕಳಪೆಯಿಂದ ಕೂಡಿದೆ. ಈ ಹಿನ್ನೆಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.