ಮಂಡ್ಯ: ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಹೇಳಿಕೆ ನೀಡಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬಿಜೆಪಿ ವಕ್ತಾರ ಸಿ.ಟಿ ಮಂಜುನಾಥ್ ಎನ್ನುವರು ಮಂಡ್ಯ ಜಿಲ್ಲಾಧಿಕಾರಿಗಳ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಗ, ದ್ವೇಷ, ತಾರತಮ್ಯ ಮಾಡದೆ ಸಂವಿಧಾನದ ಆಶಯದಂತೆ ಕೆಲಸ ಮಾಡುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ರು ತಾರತಮ್ಯದ ಮಾತುಗಳನ್ನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಜುನಾಥ್ ಪತ್ರದ ಮೂಲಕ ರಾಜ್ಯಪಾಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನನಗೆ ಮತ ಹಾಕದವರಿಗೆ ಒಂದು ಸಹಿ ಕೂಡ ಮಾಡುವುದಿಲ್ಲವೆಂದು ಇತ್ತೀಚೆಗೆ ನಾಗಮಂಗಲದ ಕೃತಜ್ಞತಾ ಸಮಾರಂಭದದಲ್ಲಿ ಚಲುವರಾಯಸ್ವಾಮಿ ಹೇಳಿದ್ದು, ಈ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾವಗಿತ್ತು. ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳದಲ್ಲಿ ಆಕ್ರೋಶಕ್ಕೆ ಕಾರವಾಗಿತ್ತು. ಮೊದಲ ಬಾರಿಗೆ ಮಂಗಳವಾರ ನಾಗಮಂಗಲಕ್ಕೆ ಭೇಟಿ ನೀಡಿದ್ದ ಎನ್.ಚಲುವರಾಯಸ್ವಾಮಿ, ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ
ರಾಜಕೀಯ ಅಂದ ಮೇಲೆ ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಒಂದು ಪಕ್ಷ ಸೋಲಬೇಕು, ಇನ್ನೊಂದು ಪಕ್ಷ ಗೆಲ್ಲಬೇಕು. ಚುನಾವಣೆಯಲ್ಲಿ ಒಂದು ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿ, ಗೆದ್ದು ಬಂದ ಬಳಿಕ ಒಂದು ಪಕ್ಷದ ಅಭ್ಯರ್ಥಿ ಆಗಿ ಉಳಿಯುವುದಿಲ್ಲ. ಒಂದು ಕ್ಷೇತ್ರದ ಜನಪ್ರತಿನಿಧಿಯಾಗಿ ನಿಲ್ಲುತ್ತಾರೆ. ಹೀಗಾಗಿ ಗೆಲುವು ಕಂಡ ಜನಪ್ರತಿನಿಧಿ ಇಡೀ ಕ್ಷೇತ್ರದ ಅಭಿವೃದ್ಧಿಗೆ ಶ್ರಮ ಪಡಬೇಕು. ಒಂದು ವೇಳೆ ಸಚಿವ ಸ್ಥಾನ ಸಿಕ್ಕರೆ ಇಡೀ ರಾಜ್ಯದ ಅಭಿವೃದ್ಧಿಗೆ ಕಟಿಬದ್ಧರಾಗಿ ದುಡಿಯಬೇಕು. ಅಂತಿಮವಾಗಿ ರಾಜ್ಯದ ಜನರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡಬೇಕು. ಆದರೆ ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕೃಷಿ ಸಚಿವರಾಗಿರುವ ಎನ್. ಚಲುವರಾಯಸ್ವಾಮಿ ಸಣ್ಣದೊಂದು ಎಡವಟ್ಟು ಮಾಡಿಕೊಂಡಿದ್ದಾರೆ