ಕೂಗು ನಿಮ್ಮದು ಧ್ವನಿ ನಮ್ಮದು

ಹಳ್ಳಿಹಕ್ಕಿ ಆರೋಪದ ಬಗ್ಗೆ ಮುಖ್ಯಮಂತ್ರಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಇಂದು ವಿಧಾನಸೌಧದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೆಚ್ ವಿಶ್ವನಾಥ್ ಆರೋಪಗಳ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಅವರ ಬಗ್ಗೆ ಹೈಕಮಾಂಡ್ ತೀರ್ಮಾನಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಹಳ್ಳಿಹಕ್ಕಿ ಆರೋಪದ ಬಗ್ಗೆ ಮುಖ್ಯಮಂತ್ರಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ರಾಜಕೀಯ ಗೊಂದಲವೇ ಇಲ್ಲ, ಯಾರೋ ಒಂದಿಬ್ಬರು ಮಾಧ್ಯಮಗಳ ಮುಂದೆ ನೀಡುವ ಹೇಳಿಕೆಗಳನ್ನು ನೀವು ಹೈಲೈಟ್ ಮಾಡುತ್ತೀರಿ, ಪಕ್ಷದ ವಿರುದ್ಧ ಮಾತನಾಡುವವರಿಗೆ ನಿನ್ನೆ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ ಎಂದರು. ಇನ್ನೂ ರಾಜ್ಯದಲ್ಲಿ ಉತ್ತಮ ಮುಂಗಾರು ಮಳೆ ಆರಂಭವಾಗಿದೆ. ರೈತರ ಬೀಜ ಬಿತ್ತನೆ ಕಾರ್ಯ ಆರಂಭವಾಗಿದೆ. ರೈತರಿಗೆ ಬೀಜ, ರಸಗೊಬ್ಬರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇವೆ. ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾದರೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇವೆ ಎಂದರು.

error: Content is protected !!