ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು (ಏ.15)ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂಬಂಧ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ನಂತರ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ತೆರಳಿ ಬೆಳಗ್ಗೆ 11 ಗಂಟೆಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹುಬ್ಬಳ್ಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇಂದು ಶಿಗ್ಗಾಂವಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತೇವೆ.

ಒಳ್ಳೆ ಮೂಹುರ್ತ ಇರುವ ಕಾರಣ ನಾಮಪತ್ರ ಸಲ್ಲಿಸುತ್ತಿದ್ದೇನೆ. 19 ರಂದು ಜನ ಸೇರಿಸಿ ನಾಮಪತ್ರ ಸಲ್ಲಿಸುತ್ತೇನೆ. ಇವತ್ತು ಇಡಿ ದಿನ ಕ್ಷೇತ್ರದಲ್ಲಿ ಇರುತ್ತೇನೆ ಎಂದು ಹೇಳಿದರು.

error: Content is protected !!